ಬ್ರಹ್ಮಾವರ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಸಮಗ್ರ ನ್ಯೂಸ್‌ : ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಇಂದು ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ನಡೆದಿದೆ.

Ad Widget ... ..

ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆಯಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮವಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ.

Ad Widget

ವಾತಾವರಣದಲ್ಲಿ ಶಾಖದ ಅಲೆಗಳ ಹೆಚ್ಚಳದಿಂದಾಗಿ ಅನೇಕ ವಾಹನಗಳು ಬಿಸಿಯಾಗುತ್ತಿವೆ ಮತ್ತು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಇದು ಕೂಡ ಘಟನೆಗೆ ಕಾರಣವಾಗಿರಬಹುದು ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *