ಮಂಗಳೂರು : ಜುಲೈ 23ರೊಳಗೆ
ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ
ಉಂಟಾಗುವ ಸಾಧ್ಯತೆ ಇರುವುದರಿಂದ ಮುಂಗಾರು ಮಳೆ ಪ್ರಮಾಣ ಹೆಚ್ಚಾಗಲಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರದ ಮೇಲೆ ಮತ್ತಷ್ಟು ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ತೀರ ಮತ್ತು ದಕ್ಷಿಣ ಭಾಗಗಳಲ್ಲಿ
ಮುಂದಿನ 5 ದಿನಗಳವರೆಗೂ ಮಳೆ
ಮುಂದುವರಿಯಲಿದ್ದು, ಉತ್ತರ ಕರ್ನಾಟಕದ ಭಾಗಗಳಲ್ಲಿ 24ರಿಂದ ಮಳೆರಾಯನ ಆರ್ಭಟ ಕಡಿಮೆಯಾಗಬಹುದು ಎಂದೂ ಅಂದಾಜಿಸಿದೆ.
ಕರಾವಳಿ ಹಾಗೂ ದಕ್ಷಿಣ ಭಾಗಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ಐಎಂಡಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕರ್ನಾಟಕದ ಭಾಗಗಳಲ್ಲಿ ಯೆಲ್ಲೋ
ಅಲರ್ಟ್ ಘೋಷಣೆ ಆಗಿದೆ. ಅಂದರೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಸಾಲಿಗೆ ಸೇರುವ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ಘಟ್ಟ ಪ್ರದೇಶಗಳಲ್ಲಿ ಈಗಾಗಲೇ ಆರೆಂಜ್ ಅಲರ್ಟ್ ಘೋಷಣೆಯಾಗಿದೆ ಎಂದು
ಬೆಂಗಳೂರು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.