ಭರ್ಜರಿಯಾಗಿ ಸಾಗುತ್ತಿರುವ ಐಪಿಎಲ್/ ಎರಡು ಪಂದ್ಯಗಳ ದಿನಾಂಕ ಬದಲು

ಸಮಗ್ರ ನ್ಯೂಸ್: ಐಪಿಎಲ್ 2024 ಭರ್ಜರಿ ಆರಂಭವನ್ನು ಪಡೆದುಕೊಂಡಿದ್ದು, ಈಗಾಗಲೇ 14 ಪಂದ್ಯಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಆದರೆ ನಡುವೆ ರಾಜಸ್ಥಾನ ರಾಯಲ್ಸ್-ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟಾನ್ಸ್- ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಬದಲಾವಣೆ ಮಾಡಲಾಗಿದೆ.

Ad Widget ... ..

ಕೋಲ್ಕತಾ ನೈಟ್ ರೈಡರ್ಸ್ ತಂಡವು ತನ್ನ ತವರಿನ ಪಂದ್ಯವನ್ನು ರಾಜಸ್ಥಾನ ರಾಯಲ್ಸ್ ಎದುರು ಏಪ್ರಿಲ್ 17ರಂದು ಆಡಬೇಕಿತ್ತು. ಇದೀಗ ಆ ಪಂದ್ಯ ಒಂದು ದಿನ ಮುಂಚಿತವಾಗಿ ಅಂದರೆ ಏಪ್ರಿಲ್ 16ರ ಮಂಗಳವಾರ ಆಡಲಿದೆ. ಇನ್ನೊಂದೆಡೆ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಏಪ್ರಿಲ್ 16ರಂದು ನಡೆಯಬೇಕಿದ್ದ ಪಂದ್ಯವನ್ನು ಏಪ್ರಿಲ್ 17ಕ್ಕೆ ಮುಂದೂಡಲ್ಪಟ್ಟಿದೆ.

Ad Widget

ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಏಪ್ರಿಲ್ 16, 2024ರಂದು ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಿಗದಿಯಾಗಿದ್ದ ಪಂದ್ಯವು ಏಪ್ರಿಲ್ 17ರಂದು ನಡೆಯಲಿದೆ ಎಂದು ಬಿಸಿಸಿಐ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment

Your email address will not be published. Required fields are marked *