ಸಮಗ್ರ ನ್ಯೂಸ್: ಹೈಕೋರ್ಟ್ನ ಹಾಲ್ 1ರಲ್ಲಿ ಮುಖ್ಯ ನ್ಯಾಯಮೂರ್ತಿ ಮುಂದೆ ವ್ಯಕ್ತಿಯೋರ್ವ ಬ್ಲೇಡ್ ನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಮೈಸೂರಿನ ಶ್ರೀರಾಂಪುರ ಮೂಲದ ಶ್ರೀನಿವಾಸ್ ಚಿನ್ನಮ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಶ್ರೀನಿವಾಸ್ ಅವರಿಗೆ ಸಂಬಂಧಿಸಿದ ಪ್ರಕರಣದೊಂದು ಹೈಕೋರ್ಟ್ ಮೆಟ್ಟಿಲೇರಿದೆ. ಪ್ರಕರಣ ವಿಚಾರಣೆ ನಡೆಯುತ್ತಿತ್ತು. ಪ್ರಕರಣದ ವಿಚಾರಣೆ ಅಂತ್ಯಕ್ಕೆ ತಲುಪಿದ್ದಂತೆ ನ್ಯಾಯಮೂರ್ತಿಗಳ ಎದುರು ಬಂದ ಶ್ರೀನಿವಾಸ್ ಅರ್ಜಿಯೊಂದನ್ನು ನ್ಯಾಯಾಲಯದ ಸಿಬ್ಬಂದಿಗೆ ನೀಡಿ, ಅನ್ಯಾಯವಾಗಿದೆ ನನಗೆ ಎಂದು ಹೇಳಿ ಬ್ಲೆಡ್ ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪೊಲೀಸರು ತಕ್ಷಣ ಶ್ರೀನಿವಾಸ್ ಅವರನ್ನು ರಕ್ಷಿಸಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಹೈಕೊರ್ಟ್ಗೆ ಕೇಂದ್ರ ವಿಭಾಗದ ಡಿಸಿಪಿ, ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.