ಸಮಗ್ರ ನ್ಯೂಸ್ : ಕಾಂಗ್ರೆಸ್ ಪಕ್ಷವೇ ರಾಹುಲ್ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಮೂಲಕ ಜಯ ಸಾಧಿಸಿದರೆ, ದೇಶದಲ್ಲಿ ಶಾಂತಿ ನೆಲೆಸುವುದಿಲ್ಲ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಹೇಳಿಕೆಗೆ ಮೋಹನ್ ಯಾದವ್ ಪ್ರತಿಕ್ರಿಯಿಸಿ, ರಾಹುಲ್ ಮಾತಿನಲ್ಲಿ ಯಾವುದೇ ಸತ್ಯವಿಲ್ಲ ಎಂದು ತಿರುಗೇಟು ನೀಡಿದರು. ಏಕೆಂದರೆ ಅವರದೇ ಪಕ್ಷದವರು ರಾಹುಲ್ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಬೇರೆಯವರು ಹೇಗೆ ಅವರನ್ನು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಹೇಳಿದರು.
ಚುನಾವಣಾ ಪ್ರಕ್ರಿಯೆ ಗರಿಗೆದರಿದಂತೆ ಕಾಂಗ್ರೆಸ್ ಪಕ್ಷದ ಸುಳಿವೇ ಇಲ್ಲ. ಈ ಬೆಳವಣಿಗೆಗೆ ರಾಹುಲ್ ಅವರೇ ಕಾರಣ. ಕಾಂಗ್ರೆಸ್ ಪಕ್ಷವನ್ನಾಗಲಿ ಅಥವಾ ಚುನಾವಣೆಯನ್ನಾಗಲಿ ರಾಹುಲ್ ಗಂಭೀರವಾಗಿ ತೆಗೆದುಕೊಂಡಿಲ್ಲ. ಕಾಂಗ್ರೆಸ್ ಪಕ್ಷವು ಯೋಚಿಸುವುದು ಒಳಿತು ಎಂದು ಹೇಳಿದರು.