ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳನ್ನು ಹಂತ ಹಂತವಾಗಿ ಆರಂಭಿಸಲು ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರಿಗೆ ವಿಸ್ತೃತ ವರದಿಯನ್ನು ಸಲ್ಲಿಸಲಾಗಿದ್ದು, ಇನ್ನೂ ಎರಡು ದಿನಗಳ ಒಳಗೆ ರಾಜ್ಯ ಸರ್ಕಾರದ ಅಧಿಕೃತ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯದಲ್ಲಿ ಮೊದಲ ಹಂತದಲ್ಲಿ 9,10,11, 12 ನೇ ತರಗತಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸುವ ಯೋಚನೆ ಶಿಕ್ಷಣ ಇಲಾಖೆ ಮುಂದಿದ್ದು, ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ನೇತೃತ್ವದಲ್ಲಿ ರಚನೆಯಾಗಿರುವ ಕಾರ್ಯಪಡೆ ಹಂತ ಹಂತವಾಗಿ ಶಾಲೆ ಆರಂಭಿಸುವಂತೆ ಸಲಹೆ ನೀಡಿದೆ ಎನ್ನಲಾಗಿದೆ.
ಹೀಗಾಗಿ ಈ ವರದಿಗೆ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದರೆ ಆಗಸ್ಟ್ 2 ರಿಂದಲೇ ರಾಜ್ಯದಲ್ಲಿ ಶಾಲೆ-ಕಾಲೇಜುಗಳು ಆರಂಭವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ