ಸಮಗ್ರ ನ್ಯೂಸ್ : ಖಾಸಗಿ ಬಸ್ ಮತ್ತು ಕಂಟೈನರ್ ನಡುವೆ ಢಿಕ್ಕಿಯಾಗಿ ಹಲವು ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾ. ಹೆ. 75ರ ಉಪ್ಪಿನಂಗಡಿ ಉದನೆ ಬಳಿಯ ನೇಲ್ಯಡ್ಕದಲ್ಲಿ ನಡೆದಿದೆ.
ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ವರನ ಕಡೆಯವರ ಮದುವೆಯ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ಗೆ ಢಿಕ್ಕಿ ಹೊಡೆದಿದೆ.
ಅವಘಡದಲ್ಲಿ ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






