ಚಾಮರಾಜನಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಂದಿ ದಾಳಿ

ಸಮಗ್ರ ನ್ಯೂಸ್‌ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಂದಿ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆಂಕಲಹುಂಡಿ ಗ್ರಾಮದಲ್ಲಿ ನಡೆದಿದೆ.

. Ad Widget . Ad Widget . Ad Widget .

ತೆಂಕಲಹುಂಡಿ ಗ್ರಾಮದ ಬೆಳ್ಳೆಗೌಡ(70) ಕಾಡಂದಿ ದಾಳಿಗೆ ತುತ್ತಾದ ರೈತ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಮಧ್ಯಾಹ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡಂದಿ ರೈತನ ತೊಡೆ ಮತ್ತು ಕಾಲಿಗೆ ಕೋರೆಯಿಂದ ಬಲವಾಗಿ ತಿವಿದ ಪರಿಣಾಮ ರೈತ ಬೆಳ್ಳೆಗೌಡ ಕೂಗಿಕೊಂಡಿದ್ದಾರೆ. ರೈತನ ಚೀರಾಟ ನೋಡಿ ಅಕ್ಕಪಕ್ಕದ ಜಮೀನಿನವರು ಸ್ಥಳಕ್ಕೆ ಬರುವಷ್ಟರಲ್ಲಿ ರೈತನ ಮೇಲೆರಗಿದ್ದ ಕಾಡಂದಿ ಓಡಿಹೋಗಿದೆ. ಇನ್ನು ಗಂಭೀರವಾಗಿ ಗಾಯಗೊಂಡ ಬೆಳ್ಳೆಗೌಡರಿಗೆ ಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *