ರಾಜ್ಯ ಸರ್ಕಾರದ ಕೆಲಸ ಹುಡುಕುತಿದ್ದೀರ? ನಿಮಗಾಗಿ ಸುವರ್ಣಾವಕಾಶ!

ಸಮಗ್ರ ಉದ್ಯೋಗ: ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 32 ಚಾಲಕ, ಗ್ರೂಪ್​ ಡಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು.

Ad Widget ... ..

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

Ad Widget

ಹುದ್ದೆಯ ಮಾಹಿತಿ:
ಡ್ರೈವರ್- 3 ಹುದ್ದೆಗಳು
ಗ್ರೂಪ್ ಡಿ ಹುದ್ದೆಗಳು- 29 (ಅಂಧ ಮತ್ತು ಕಡಿಮೆ ದೃಷ್ಟಿ ಹೊಂದಿರುವವರಿಗೆ 3 ಹುದ್ದೆಗಳು)

ವಿದ್ಯಾರ್ಹತೆ:
ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 5, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
SC/ST/ಪ್ರವರ್ಗ-I/PWD ಅಭ್ಯರ್ಥಿಗಳು: ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.350/-
ಸಾಮಾನ್ಯ ಅಭ್ಯರ್ಥಿಗಳು: ರೂ.600/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ವೇತನ:
ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 21,400-42,000 ಸಂಬಳ ಕೊಡಲಾಗುತ್ತದೆ.
ಡ್ರೈವರ್- ಮಾಸಿಕ ₹ 21,400-42,000
ಗ್ರೂಪ್ ಡಿ ಹುದ್ದೆಗಳು- ಮಾಸಿಕ ₹ 17,000-28,950

ಉದ್ಯೋಗದ ಸ್ಥಳ:
ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಕಾರ್ಯದರ್ಶಿ
ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ
ಅಂಚೆ ಪೆಟ್ಟಿಗೆ ಸಂಖ್ಯೆ. 5079
1 ನೇ ಮಹಡಿ
ವಿಧಾನ ಸೌಧ
ಬೆಂಗಳೂರು – 560001

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *