ಸಮಗ್ರ:ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ಸಂಘದ ವತಿಯಿಂದ ವೃತ್ತಿ ಮಾರ್ಗದರ್ಶನ ಮತ್ತು ವಿದ್ಯಾರ್ಥಿ ಪ್ರೇರಣೆ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಎಂಬಿಎ ವಿಭಾಗದ ಪ್ರಾಧ್ಯಾಪಕ ಕೃಷ್ಣಾನಂದ ಎ. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳ ಮುಂದೆ ಇರುವ ವಿವಿಧ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥೆ ರಮಾ ದೇವಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ., ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ವಿವೇಕ್ ಪಿ., ವಿದ್ಯಾರ್ಥಿ ಆಪ್ತ ಸಮಾಲೋಚಕ ರಂಗಸ್ವಾಮಿ ಹಾಗೂ ವಿದ್ಯಾರ್ಥಿ ಸಂಘದ ಸಲಹೆಗಾರ ಬಸನಗೌಡ ಎಫ್. ಪಾಟೀಲ್ ಉಪಸ್ಥಿತರಿದ್ದರು. ರಕ್ಷಿತಾ ಕೆ. ಪ್ರಾರ್ಥಿಸಿ, ಅಭಿಷೇಕ್ ಸ್ವಾಗತಿಸಿ, ಮುಖೇಶ್ ಕೃಷ್ಣ ವಂದಿಸಿ, ರಕ್ಷಿತಾ ಡಿ.ಎ ಕಾರ್ಯಕ್ರಮ ನಿರೂಪಿಸಿದರು.






