ಕೊಳವೆಗೆ ಬಿದ್ದ ಮಗು ಲಚ್ಚಾಣ ಸಿದ್ದನ ಮಹಿಮೆಯಿಂದ ಬದುಕುಳಿಯಿತು; ಸಾರ್ವಜನಿಕರು

ಸಮಗ್ರ ನ್ಯೂಸ್‌ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ 21 ಗಂಟೆಗಳ ಕಾರ್ಯಾಚರಣೆಯಿಂದ ಬದುಕುಳಿಯಲು ಮುಖ್ಯ ಕಾರಣ ಲಚ್ಚಾಣ ಸಿದ್ದನ ಮಹಿಮೆಯಿಂದ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Ad Widget ... ..

ಮಗುವನ್ನು ರಕ್ಷಿಸುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದ್ದು, SDRF, NDRF, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸೇರಿದಂತೆ ರಕ್ಷಣಾ ಕಾರ್ಯಾಚರಣಾ ತಂಡವು ನಿರಂತರ ಕಾರ್ಯಾಚರಣೆಗೆ ಫಲ ನೀಡಿದೆ.

Ad Widget

ಮೇಲೆತ್ತಿದ ಕೂಡಲೇ ಸನ್ನದ್ಧರಾಗಿದ್ದ ವೈದ್ಯರ ತಂಡ ಮಗುವಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆಯಂಬುಲೆನ್ಸ್ ಮೂಲಕ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮಗು ಕೊಳವೆ ಬಾವಿಗೆ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆ ಬುಧವಾರ ಸಂಜೆ 6 ಗಂಟೆಗೆ ರಕ್ಷಣೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಕಾರ್ಯಾಚರಣೆಗೆ ಅಡ್ಡಿಯಾಗಿದ್ದ ಕಲ್ಲು ಬಂಡೆಗಳನ್ನು ಕೊರೆದ ತಂಡವು ಇಂದು ಬೆಳಿಗ್ಗೆಯೇ ಮಗುವನ್ನು ಸಮೀಪಿಸಿತ್ತು. ಈ ವೇಳೆ ಮಗುವಿಗೆ ನಿರಂತರ ಆಕ್ಸಿಜನ್ ಪೊರೈಕೆ ಮಾಡಲಾಗುತ್ತಿತ್ತು. ಅಂತಿಮವಾಗಿ ಕೊಳವೆ ಬಾವಿಯ ಪೈಪ್ ಅನ್ನು ಕತ್ತರಿಸಿ ಮಗುವನ್ನು ಮೇಲೆತ್ತಲಾಯಿತು.

Leave a Comment

Your email address will not be published. Required fields are marked *