ಸಮಗ್ರ ನ್ಯೂಸ್: ನಟಿ, ಬಿಗ್ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ, ಮಗುವನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿ ಪಿಡಿಜೆ ಕೋರ್ಟ್ ಇಬ್ಬರ ಶೂರಿಟಿ ಹಾಗೂ ಒಂದು ಲಕ್ಷ ರೂ. ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಿದೆ.
ಮಾ.22ರಂದು ಈಕೆಯನ್ನು ಬ್ಯಾಡರಹಳ್ಳಿ ಪೆÇಲೀಸರು, ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಿದ್ದರು. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.