ಬೆಂಗಳೂರು : ರಾಜ್ಯಾದ್ಯಂತ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಮುಂದಿನ 24 ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತೆ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಗದಗ, ಕಲಬುರಗಿ, ಹಾವೇರಿ, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯಾದ್ಯಂತ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಉಗ್ರ ರೂಪ ಪ್ರದರ್ಶಿಸಿದ್ದು, ಪ್ರವಾಹದ ಆತಂಕ ಕಾಣಿಸಿದೆ. ಚಾರ್ಮಾಡಿ ಘಾಟ್ ಸೇರಿ ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡದ ಹಲವೆಡೆ ಮತ್ತೆ ಭೂಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಭಾರೀ ಮಳೆಯಿಂದಾಗಿ ರಾಜ್ಯಾದ್ಯಂತ 9 ಜನರು ಬಲಿಯಾಅಗಿದ್ದಾರೆ ಎಂದು ವರದಿಯಾಗಿದೆ.