ಬೆಂಗಳೂರು : ಅಂಗನವಾಡಿ ಮೂಲಕ ವಿತರಿಸಲಾಗಿರುವ ಮೊಟ್ಟೆ ಪೂರೈಕೆ ಟೆಂಡರ್ ಗಾಗಿ ದೊಡ್ಡ ಸೀಲ್ ನಡೆದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರೇ ಈ ಡೀಲ್ ಗೆ ಒಪ್ಪಿಕೊಂಡಿದ್ದಾರೆ ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. ಗರ್ಭಿಣಿಯರಿಗೆ, ಅಪೌಷ್ಟಿಕ ಮಕ್ಕಳಿಗೆ ನೀಡಲಾಗುವ ಮಾತೃಪೂರ್ಣ ಮೊಟ್ಟೆ ಟೆಂಡರ್ ಪ್ರಕ್ರಿಯೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿತ್ತು.
ಆದರೆ ಈ ಟೆಂಡರ್ ನ್ನು ತಮಗೆ ಬೇಕಾದವರಿಗೆ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಮೊದಲು ಅಂಗನಾಡಿಯಿಂದಲೇ ನೇರವಾಗಿ ಮೊಟ್ಟೆ ಖರೀದಿ ಮಾಡಿ ಮಕ್ಕಳು ಹಾಗೂ ಗರ್ಭಿಣಿಯರಿಗೆ ನೀಡಲಾಗಿತ್ತು, ಆದರೆ ಹಣ ಮಾಡುವ ಉದ್ದೇಶದಿಂದ ಸಚಿವೆ ಶಶಿಕಲಾ ಜೊಲ್ಲೆ ಟೆಂಡರ್ ಮೂಲಕ ಮೊಟ್ಟೆ ಖರೀದಿ ಮಾಡುವ ಪ್ರಕ್ರಿಯೆಗೆ ಮುಂದಾಗಿದ್ದರು.
ಆ ಮೂಲಕ ಬಡವರ ಯೋಜನೆಯಲ್ಲಿ ಅಕ್ರಮಕ್ಕೆ ಕಮಿಷನ್ ಪಡೆಯಲು ಮುಂದಾಗಿದ್ದರು ಎನ್ನಲಾಗಿದೆ.
ಟೆಂಡರ್ ಬೇಕು ಎಂದು ಹೋದ ತಂಡಕ್ಕೆ ತಿಂಗಳಿಗೆ ಇಂತಿಷ್ಟು ಎಂದು ಡಿಮ್ಯಾಂಡ್ ಮಾಡಿದ್ದಾರೆ. ಅಂದರೇ ತಿಂಗಳಿಗೆ ಮಿನಿಸ್ಟರ್ ಗೆ 1 ಕೋಟಿ ಕೊಡಿ, ನನಗೆ 50 ಲಕ್ಷ ಕೊಡಿ ಎಂದು ಡಿಮ್ಯಾಂಡ್ ಇಟ್ಟಿದ್ದಾರೆ. ಅಂಗನವಾಡಿಗಳಿಗೆ ಮೊಟ್ಟೆ ವಿತರಣೆಯಲ್ಲಿ ಅಕ್ರಮಕ್ಕೆ ತಿಂಗಳ ಸಂದಾಯದ ರೂಪದಲ್ಲಿ ಅಕ್ರಮ ಹಣ ಲೂಟಿಗೆ ಸಚಿವೆ ಶಶಿಕಲಾ ಜೊಲ್ಲೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅಂಗನವಾಡಿ ಮೂಲಕ ವಿತರಿಸಲಾಗಿರುವ ಮೊಟ್ಟೆ ಪೂರೈಕೆ ಟೆಂಡರ್ ಗಾಗಿ ದೊಡ್ಡ ಡೀಲ್ ನಡೆದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರೇ ಈ ಡೀಲ್ ಗೆ ಒಪ್ಪಿಕೊಂಡಿದ್ದಾರೆ ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. ಅಲ್ಲದೇ ಸಚಿವೆಯ ಅಕ್ರಮಕ್ಕೆ ಶಾಸಕ ಪರಣ್ಣ ಮುನಳ್ಳಿ ಕೂಡ ಸಾಥ್ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಒಟ್ಟಿನಲ್ಲಿ ಬಡ ಮಕ್ಕಳ ಹಿತ ಕಾಪಾಡಬೇಕಾದ ಸಚಿವರು ಅಕ್ರಮದಲ್ಲಿ ಭಾಗಿಯಾಗಿದ್ದು, ನಾಚಿಗೇಡಿತನ ಎಂದು ಜನರು ಹಿಡಿಶಾಪ ಹಾಕುತ್ತಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ಮೊಟ್ಟೆ ಡೀಲ್ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವರದಿ ಕೇಳಿದ್ದಾರೆ.
ಬಡವರ, ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್ ಪಡೆಯಲು ಮುಂದಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರ ಮುಖವಾಡವನ್ನು ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಸಿಎಂ ಬಿಎಸ್ ಯಡಿಯೂರಪ್ಪ ಬಳಿ ಪ್ರಕರಣ ಸಂಬಂಧ ಸಂಪೂರ್ಣ ವರದಿ ನಿಡುವಂತೆ ಕೇಳಿದ್ದಾರೆ ಎನ್ನಲಾಗಿದೆ.
ಈ ನಡುವೆ ಬೆಂಗಳೂರಿನ ಆನಂದರಾವ್ ಸರ್ಕಲ್ ಬಳಿಯಿರುವ ಕಾಂಗ್ರೆಸ್ ಭವನ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ತಕ್ಷಣವೇ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿದ್ದ ಸಚಿವರೊಂದಿಗೆ ಶಾಸಕ ಪರಣ್ಣ ಮುನವಳ್ಳಿ ಅವರು ಕೂಡ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಆಗ್ರಹಿಸಿದೆ.