ತುಮಕೂರು: ನೀರು ಕೇಳುವ ನೆಪದಲ್ಲಿ ಮನೆ ದರೋಡೆಗೆ ಯತ್ನ| ಆರೋಪಿಗಳ ಬಂಧನ

ಸಮಗ್ರ ನ್ಯೂಸ್‌ : ಮನೆಗೆ ಬಂದು ನೀರು ಕೇಳುವ ನೆಪದಲ್ಲಿ ಮಾಲೀಕನಿಗೆ ಪಿಸ್ತೂಲ್‍ನಿಂದ ಗುಂಡು ಹಾರಿಸಿ ಮನೆ ದರೋಡೆ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ.

Ad Widget ... ..

ಬಂಧಿತ ಆರೋಪಿಗಳನ್ನು ಜಾರ್ಖಂಡ್ ಮೂಲದ ಏಜಾಸ್ ಮಿರ್ದಹ (30), ಸಹಿಬುಲ್ ಅನ್ಸಾರಿ (30) ಎಂದು ಗುರುತಿಸಲಾಗಿದೆ.

Ad Widget

ಆರೋಪಿಗಳು ಮಾ.26 ರಂದು ಕುಣಿಗಲ್‍ನ ಉರ್ಕೆಹಳ್ಳಿ ಗ್ರಾಮದ ಗಂಗಣ್ಣ ಎಂಬುವರ ತೋಟದ ಮನೆಗೆ ಕುಡಿಯುವ ನೀರು ಕೇಳಿಕೊಂಡು ಬಂದಿದ್ದರು. ಬಳಿಕ ಮನೆಯಲ್ಲಿದ್ದ ಹಣ ದೋಚಲು ಯತ್ನಿಸಿದ್ದರು. ಈ ವೇಳೆ ದರೋಡೆ ತಡೆಯಲು ತಡೆಯಲು ಯತ್ನಿಸಿದ್ದ ಗಂಗಣ್ಣನ ಕಾಲಿಗೆ ಗುಂಡು ಹಾರಿಸಿದ್ದರು.

ಈ ಸಂಬಂಧ ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದೀಗ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಒಂದು ಬೈಕ್, ಎರಡು ಪಿಸ್ತೂಲ್, ನಾಲ್ಕು ಸಜೀವ ಗುಂಡುಗಳು ಹಾಗೂ ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *