ಬೆಂಗಳೂರಿನ ಆರ್.ಟಿ ನಗರದಲ್ಲಿ ಬೆಂಕಿ ಅವಘಡ

ಸಮಗ್ರ ನ್ಯೂಸ್: ಬೆಂಗಳೂರಿನ ಮಿರಾಕಲ್ ಡ್ರಿಂಕ್ಸ್ ಮತ್ತು ಐಡಿಎಸ್ ಕಟ್ಟಡದ ನೆಲಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Ad Widget ... ..

ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಆರ್.ಟಿ.ನಗರ ಪೊಲೀಸರ ದೌಡಾಯಿಸಿದ್ದು, ಪಕ್ಕದ ಕಟ್ಟಡಕ್ಕೆ ಏಣಿ ಇಟ್ಟು ಕಟ್ಟಡದಲ್ಲಿದ್ದವರ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ.
5 ನೀರಿನ ಟ್ಯಾಂಕರ್ ಗಳಲ್ಲಿ ನೀರಿನ ವ್ಯವಸ್ಥೆ ಮಾಡಿದ್ದು ಬೆಂಕಿ ನಂದಿಸಲು ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.

Ad Widget

Leave a Comment

Your email address will not be published. Required fields are marked *