ಸಮಗ್ರ ನ್ಯೂಸ್ : ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಚಾಮರಾಜನಗರದ ಕೊಳ್ಳೇಗಾಲದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ದೇವಲ ಮಹರ್ಷಿ ವೃತ್ತದಲ್ಲಿ ಜಮಾಯಿಸಿದ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗುತ್ತ ಡಾ.ರಾಜ್ ರಸ್ತೆ ಮತ್ತು ಡಾ.ಬಿ.ಆರ್ ಅಂಭೇಡ್ಕರ್ ರಸ್ತೆಯಲ್ಲಿ ಮೆರವಣಿಗೆ ನಡೆಸುವ ಮೂಲಕ ಎಡಿಬಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.
ರೈತ ಸಂಘ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ ಚಾಮರಾಜನಗರ ಜಿಲ್ಲೆಯಾದ್ಯಂತ ಬರಗಾಲ ಉಲ್ಬಣವಾಗಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆ ಉಂಟಾಗಿದೆ ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೂರಕ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.