ಸಮಗ್ರ ನ್ಯೂಸ್ : ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪ್ರವೀಣ್ ಚೌಗುಲೆಯನ್ನು ವೀಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು.
ಈ ಪ್ರಕರಣದ ತನಿಖಾಧಿಕಾರಿ ಮಂಜುನಾಥ ಗೌಡ, ಆರೋಪಿ ಪರ ವಕೀಲರು ಈ ವೇಳೆ ಉಪಸ್ಥಿತರಿದ್ದರು.
ವಿಶೇಷ ಸರಕಾರಿ ಅಭಿಯೋಜಕರು ಮುಂದಿನ ವಿಚಾರಣೆ ಸಂದರ್ಭದಲ್ಲಿ ಪ್ರಕರಣಕ್ಕೆ ಪೂರಕವಾದ ಸಾಕ್ಷಿದಾರರ ಹೆಸರು ಸಹಿತವಾದ ಮೆಮೊ ಸಲ್ಲಿಸಬೇಕು. ಆ ಮೂಲಕ ಸಾಕ್ಷಿದಾರರಿಗೆ ಕೋರ್ಟ್ ಸಮನ್ಸ್ ನೀಡಲು ಸಾಧ್ಯವಾಗುತ್ತದೆ ಎಂದು ನ್ಯಾಯಾಧೀಶರು ವಿಚಾರಣೆ ವೇಳೆ ತಿಳಿಸಿದ್ದಾರೆ.
ಪ್ರಕರಣದ ಶೀಘ್ರ ವಿಲೇವಾರಿಗೆ ಅನುಕೂಲವಾಗುವಂತೆ ಎರಡೂ ಕಡೆಯಿಂದ ಪೂರ್ಣ ಸಹಕಾರ ನೀಡಲು ಕೋರ್ಟ್ ತಿಳಿಸಿದೆ. ಮುಂದಿನ ವಿಚಾರಣೆ ಎ. 10ರಂದು ನಡೆಯಲಿದೆ. ಆ ದಿನ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಮುಂದಿನ ಮೂರು ದಿನಗಳ ಕಾಲ ವಿಚಾರಣೆಗೆ ಕರೆಯಬೇಕಾದ ಸಾಕ್ಷಿಗಳ ಕುರಿತು ಜ್ಞಾಪನಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಅದರಂತೆ ನ್ಯಾಯಾಲಯ ಸಾಕ್ಷಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡುತ್ತದೆ. ಅಂದಿನಿಂದ ಪ್ರಕರಣದ ವಿಚಾರಣೆ ಆರಂಭಗೊಳ್ಳುತ್ತದೆ ಎಂದು ಮೂಲಗಳು ತಿಳಿಸಿವೆ.