ಮೋದಿ ವಿರುದ್ಧ ಆಧಾರ ರಹಿತ ಆರೋಪ/ ಸಿದ್ಧರಾಮಯ್ಯ ವಿರುದ್ಧ ದೂರು

ಸಮಗ್ರ ನ್ಯೂಸ್: ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪ ಮಾಡಿರುವ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸಚಿವರ ವಿರುದ್ಧ ಬಿಜೆಪಿ ಮುಖ್ಯ ಚುನಾವಣಾ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದೆ.

Ad Widget ... ..

ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕ್ತಾರ ಅಶೋಕ್ ಗೌಡ, ರಾಜ್ಯ ಕಾನೂನು ಆಯೋಗದ ಪ್ರತಿನಿಧಿ ವಸಂತ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಮುಖ್ಯ ಚುನಾವಣಾ ಆಯುಕ್ತರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ.

Ad Widget

ಚುನಾವಣಾ ಸಚಿವರ ಸಮಿತಿಗೆ ಒಟ್ಟು ನಾಲ್ಕು ವಿಷಯಗಳನ್ನು ಮಂಡಿಸಲಾಗಿದೆ. ಪುಲ್ವಾಮ ದಾಳಿಗೆ ಬಿಜೆಪಿ ಹೊಣೆ ಎಂದು ಹೇಳುವ ಮೂಲಕ ಕಾಂಗ್ರೆಸ್ಸಿಗರು ಮತ್ತು ಮಂತ್ರಿಗಳ ವಿರುದ್ಧ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂಬ ದೂರುಗಳು; ಚೀನಾ ಯುದ್ಧದ ಸಂದರ್ಭದಲ್ಲಿ ಪ್ರಧಾನಿ ಅಫೀಮು ಸೇವಿಸಿ ಮಲಗಿದ್ದರು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿರುದ್ಧ ದೂರು; ಬಿಜೆಪಿಯವರೆಲ್ಲಾ ಭಯೋತ್ಪಾದಕರು ಎಂಬ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ದೂರು. ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಆಧಾರದ ಮೇಲೆ ಮತ ಕೇಳುತ್ತಿರುವ ವಿರುದ್ದ ಮುಖ್ಯ ಚುನಾವಣಾ ಆಯುಕ್ತರ ಕಚೇರಿಯಲ್ಲಿ ದೂರು ದಾಖಲಿಸಲಾಗಿದೆ.

Leave a Comment

Your email address will not be published. Required fields are marked *