ಸಮಗ್ರ ನ್ಯೂಸ್: 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮಾ.11,12 ಮತ್ತು 25ರಿಂದ 28ರವರೆಗೆ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ ಮೌಲ್ಯಾಂಕನದ ಪರೀಕ್ಷೆಯ ಫಲಿತಾಂಶವನ್ನು ಶಾಲೆಗಳಲ್ಲಿ ಏ.8ರಂದು ಪ್ರಕಟಿಸುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೂಚಿಸಿದೆ.
ಏ.2ರೊಳಗೆ ಬ್ಲಾಕ್ ಹಂತದಲ್ಲಿ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಉತ್ತರ ಪತ್ರಿಕೆಗಳನ್ನು ಸಂಬಂಧಿಸಿದ ಶಾಲೆಗಳಿಗೆ ಮರು ರವಾನಿಸಲು ಸೂಚಿಸಲಾಗಿತ್ತು. ಹಾಗೆಯೇ ಈ ವಿದ್ಯಾರ್ಥಿಗಳ ಫಲಿತಾಂಶವನ್ನು ಏ.8ರಂದು ನಡೆಸುವ ಸಮುದಾಯದತ್ತ ಶಾಲಾ ದಿನದಂದು ಬೆಳಗ್ಗೆ 9 ಗಂಟೆಯೊಳಗೆ ಪ್ರಕಟಿಸಬೇಕು.ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಫಲಿತಾಂಶ ಪ್ರಕಟಿಸಬೇಕು. ಫಲಿತಾಂಶ ಪ್ರಕಟಿಸಿರುವ ಬಗ್ಗೆ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರಶಿಕ್ಷಾಧಿಕಾರಿಗಳು ಮಂಡಳಿಗೆ ವರದಿ ನೀಡುವಂತೆ ಮಂಡಳಿ ಅಧ್ಯಕ್ಷರು ಸೂಚಿಸಿದ್ದಾರೆ.