ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್

ಸಮಗ್ರ ನ್ಯೂಸ್: ಮಾಜಿ ಸಿಎಂ, ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹಾಗೂ ಮಾಜೀ ಸ್ಪೀಕರ್ ರಮೇಸ್ ಕುಮಾರ್ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.

Ad Widget ... ..

ಈ ಕುರಿತಂತೆ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮೊಯ್ಲಿ ಅವರು, ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ. ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದರು.

Ad Widget

ಕೇವಲ ರಾಜಕಾರಣಿಯಾಗದ ವೀರಪ್ಪ ಮೊಯ್ಲಿ ಅವರು, ಸಾಹಿತಿ ಕೂಡ ಆಗಿದ್ದಾರೆ. ಅವರ ಹೆಂಡತಿ ಮಾಲತಿ ಮೊಯ್ಲಿ ಸಹ ಲೇಖಕಿಯಾಗಿದ್ದಾರೆ.

ಈ ನಡುವೆ ಮಾಜಿ ಸ್ಪೀಕರ್ ಹಾಗೂ ಹಿರಿಯ ರಾಜಕಾರಣಿ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿನಾಗುತ್ತೇನೆ ಎಂದು ಸ್ವಗ್ರಾಮ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್​ನಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಅಡ್ಡಗಲ್ ಗ್ರಾಮದ ಪ್ರಚಾರ ಸಭೆಯಲ್ಲಿ ಮಾತನಾಡಿದ ರಮೇಶ್ ಕುಮಾರ್, ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದರು. ಅಧಿಕಾರದಾಸೆಗೆ ಅನೈತಿಕ ರಾಜಕಾರಣ ಮಾಡುತ್ತಿದ್ದಾರೆ. ನನಗೆ ಮೋಸ ಮಾಡಿದವರು ಸರ್ವನಾಶ ಆಗುತ್ತಾರೆ ಎಂದು ಕಿಡಿಕಾರಿದರು.

Leave a Comment

Your email address will not be published. Required fields are marked *