ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮದ್ಯ ನೀತಿ ಹಗರಣದಲ್ಲಿ ಇಡಿ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‍ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಅರವಿಂದ್ ಕೇಜ್ರಿವಾಲ್ ಇದೀಗ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ತನ್ನ ಬಂಧನದ ವಿರುದ್ದ ಕೇಜ್ರವಾಲ್ ಮಾಡಿದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದ್ದು, ಕೇಜ್ರಿವಾಲ್ ಅವರ ಬಂಧನವು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ಅವರ ಬಂಧನವನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‍ಲ್ಲಿ ಅರ್ಜಿ ಸಲ್ಲಿಸುವ ಹಕ್ಕು ಅರವಿಂದ್ ಕೇಜ್ರಿವಾಲ್‍ಗೆ ಇದೆ ಎಂದು ದೆಹಲಿ ಸಿಎಂ ಪರ ವಕೀಲ ರಿಷಿಕೇಶ್ ಕುಮಾರ್ ಹೇಳಿದ್ದಾರೆ. ಅರವಿಂದ್ ಕೇಜಿವಾಲ್ ಅವರ ಅಕ್ರಮ ಬಂಧನವನ್ನು ನಾವು ಪ್ರಶ್ನಿಸಿದ್ದೇವೆ. ಬಂಧನ ವಾರಂಟ್ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಅವರನ್ನು ಬಂಧಿಸುವ ಅಧಿಕಾರ ಇಡಿಗೆ ಇದೆ. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು ಎಂದು ರಿಷಿಕೇಶ್ ಕುಮಾರ್ ಹೇಳಿದ್ದಾರೆ.