ಸಮಗ್ರ ಉದ್ಯೋಗ: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್-ಬಿ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ & ಆಫ್ಲೈನ್ ಮೂಲಕ ಅರ್ಜಿ ಹಾಕಬೇಕು.
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 33 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 35,400
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ & ಆಫ್ಲೈನ್ ಮೂಲಕ ಅಪ್ಲೈ ಮಾಡಬಹುದು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://www.ncbs.res.in/jobportal/node/add/application/87717apply here
ಅಥವಾ ಆಫ್ಲೈನ್ ಮೂಲಕ ಅರ್ಜಿ ಹಾಕುವವರು ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯಸ್ಥರು, (A&F)
ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರ
ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್
GKVK ಪೋಸ್ಟ್, ಬಳ್ಳಾರಿ ರಸ್ತೆ
ಬೆಂಗಳೂರು: 560065