ಹುಬ್ಬಳ್ಳಿ: ಗಾಂಜಾ ಘಾಟು| ಅಲರ್ಟ್ ಆದ CEN ಪೊಲೀಸರು

ಸಮಗ್ರ ನ್ಯೂಸ್‌ : ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಗಾಂಜಾ ಮಾರಾಟ, ಸಾಗಾಟ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಗಾಂಜಾ ಪ್ರಕರಣಗಳು ಏರುತ್ತಲೇ ಇವೆ. ಇದಕ್ಕೆಲ್ಲ ಕಡಿವಾಣ ಹಾಕುವ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಅಭಿಯಾನ ಆರಂಭಿಸಿದ್ದಾರೆ.

Ad Widget ... ..

ಅದರಂತೆ ಇಂದು CEN ಪೊಲೀಸರು ಹುಬ್ಬಳ್ಳಿಯ ಹೊಸ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಜನಜಂಗುಳಿ ಪ್ರದೇಶದಲ್ಲಿ ಇನ್ಸ್‌ಪೆಕ್ಟರ್ ಬಿ.ಕೆ ಪಾಟೀಲ್ ನೇತೃತ್ವದಲ್ಲಿ ಅನುಮಾನಾಸ್ಪದ ಜನರನ್ನು ತಡೆದು ಶ್ವಾನದಳದಿಂದ ತಪಾಸಣೆ ನಡೆಸಿದ್ದಾರೆ.

Ad Widget

ಈ ವೇಳೆ ಸಾರ್ವಜನಿಕರಿಗೆ ಗಾಂಜಾ ಮಾರಾಟ ಹಾಗೂ ಸಾಗಾಟ ಕಂಡು ಬಂದಲ್ಲಿ, ಸ್ಥಳೀಯ ಪೊಲೀಸರು ಇಲ್ಲವೇ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದರು. ಅವಳಿನಗರದಲ್ಲಿ ಗಾಂಜಾ ತಡೆಯಲು ಸಹಕರಿಸಲು ತಿಳಿಸಿದರು.

Leave a Comment

Your email address will not be published. Required fields are marked *