ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಎ.12) ಬೆಳಗ್ಗೆ ನಡೆದಿದೆ.

Ad Widget ... ..

ಮೃತ ನವೀನ್ (30) ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ‌ ಮಾಡುತ್ತಿದ್ದನು.

Ad Widget

ನವೀನ್​ ಇಂದು ಬೆಳಿಗ್ಗೆ 8:20ರ ಸುಮಾರಿಗೆ ಫ್ಲೈಓವರ್​ ಮೇಲೆ ಬೈಕ್​ ಪಾರ್ಕ್​ ಮಾಡಿ, ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಟರಾಯನಪುರ ಸಂಚಾರ ಪೊಲೀಸರು ಕೂಡಲೆ ನವೀನ್​ ಬಳಿ ಧಾವಿಸಿದ್ದಾರೆ. ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ನವೀನ್​ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ವಿಕ್ಟೋರಿಯಾ ಆಸ್ಪತ್ರೆ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Leave a Comment

Your email address will not be published. Required fields are marked *