ಗದಗ:ಸಾರಿಗೆ ಬಸ್ ಪಲ್ಟಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್‌ : ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ.

Ad Widget ... ..

ಪಾಟಾ ಕಟ್ ಆಗಿದ್ದರಿಂದ ಬೆಳ್ಳಟ್ಟಿಯಿಂದ ಮುಂಡರಗಿ ಹೋಗುತ್ತಿದ್ದ ಬಸ್ ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Ad Widget

ಘಟನೆಯ ವೇಳೆ ಗ್ರಾಮಸ್ಥರು ಬಸ್ ಮುಂದಿನ ಗ್ಲಾಸ್ ಒಡೆದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಸುಸ್ಥಿತಿಯಲ್ಲಿ ಇಲ್ಲದ ಕಾರಣ ಅಪಘಾತವಾಗಿದೆ ಎಂದು ಪ್ರಯಾಣಿಕರ ಆರೋಪಿಸಿದ್ದಾರೆ.

Leave a Comment

Your email address will not be published. Required fields are marked *