ಸಮಗ್ರ ನ್ಯೂಸ್ : ಕುಮಾರಪಟ್ಟಣ ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು, ಅಂಗನವಾಡಿ ಕೇಂದ್ರಗಳಲ್ಲಿ ಬಿಸಿಲಿನ ಝಳಕ್ಕೆ ಮಕ್ಕಳು ನಲಗುವಂತಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಿದೆ.
ಬೆಳಿಗ್ಗೆ 9.30ರಿಂದ ಮಧ್ಯಾಹ್ನ 4 ಗಂಟೆವರೆಗೆ ನಿಗದಿಪಡಿಸಿದ್ದ ಸಮಯವನ್ನು ಏಪ್ರಿಲ್ ಮತ್ತು ಮೇ ತಿಂಗಳಿಗೆ ಅನ್ವಯವಾಗುವಂತೆ ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರ ವರೆಗೆ ನಡೆಸುವಂತೆ ಸಮಯ ಬದಲಾಯಿಸಿ ಆದೇಶ ಹೊರಡಿಸಿದೆ. ಇದೇ ಆದೇಶವನ್ನು ಹಾವೇರಿ ಜಿಲ್ಲೆಗೂ ವಿಸ್ತರಿಸಬೇಕು ಎಂದು ಸ್ವಾ–ಕರವೇ ರಾಜ್ಯ ಘಟಕದ ಅಧ್ಯಕ್ಷ ನಿತ್ಯಾನಂದ ಕುಂದಾಪುರ ಒತ್ತಾಯಿಸಿದ್ದಾರೆ.
ಬಿಸಿಲಿನ ತಾಪ ಹೆಚ್ಚಾದ ಹಿನ್ನೆಲೆಯಲ್ಲಿ ಬೆ.8ರಿಂದ ಮಧ್ಯಾಹ್ನ 12ಗಂಟೆವರೆಗೆ ಅಂಗನವಾಡಿಗಳನ್ನು ನಡೆಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಏ.15ರಿಂದ ಜಿಲ್ಲೆಯಾದ್ಯಂತ ಜಾರಿಯಾಗಲಿದೆ’ ಎಂದು ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ ಅಲದರ್ತಿ ತಿಳಿಸಿದರು.