ಪುರುಷರಿಗೂ ಉಚಿತ ಬಸ್ ಪ್ರಯಾಣ – ಬಸವರಾಜ ರಾಯರೆಡ್ಡಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದು, ಶೀಘ್ರವೇ ೬೫ ವರ್ಷ ಮೇಲ್ಪಟ್ಟ ಪುರುಷರಿಗೂ ಉಚಿತ ಬಸ್ ಪ್ರಯಾಣ ಕಲ್ಪಿಸುತ್ತೇವೆ ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

Ad Widget ... ..

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಹಣಕಾಸು ಮಂತ್ರಿ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಕೋರಿದ್ದೇನೆ. ಹಣಕಾಸು ಮಂತ್ರಿ ಆದರೆ ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತೇನೆ ಎಂದರು.

Ad Widget

ಪುರುಷರಿಗೂ ಉಚಿತ ಬಸ್ ಪ್ರಯಾಣ ನೀಡಲು ಬಜೆಟ್ ನಲ್ಲಿ ಚಿಂತಿಸಿದ್ದೆ. ಮುಂಬರುವ ದಿನಗಳಲ್ಲಿ ೬೫ ವರ್ಷ ಮೇಲ್ಪಟ್ಟ ಪುರುಷರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *