Ad Widget .

ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಜಮೀರ್ ಅಹಮ್ಮದ್​ ಖಾನ್​ಗೆ ಎದೆ ನೋವು: ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಲೋಕ ಚುನಾವಣೆ ಹಿನ್ನೆಲೆ ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆಂದು ಚಿತ್ರದುರ್ಗಕ್ಕೆ ತೆರಳಿದ್ದ ಸಚಿವ ಜಮೀರ್ ಅಹಮ್ಮದ್​ ಖಾನ್​ಗೆ​ ಎದೆ ನೋವು ಕಾಣಿಸಿಕೊಂಡಿದೆ. ಸಂಜೆ ನಾಲ್ಕು ಗಂಟೆ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದರು. ಈ ವೇಳೆ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು..

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅದೃಷ್ಟವಶಾತ್ ಅಂತಹ ಗಂಭೀರವಾಗಿ ಏನು ಆಗಿಲ್ಲ, ಎಲ್ಲಾ ಪರೀಕ್ಷೆಯಲ್ಲಿ ನಾಮರ್ಲ್​ ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಜಮೀರ್ ಅಹಮ್ಮದ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಳಿಕ ಮಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್​, ಬೆಳಗ್ಗೆ ಒಡೆ ತಿಂದ ಕಾರಣಕ್ಕೆ ಗ್ಯಾಸ್ಟ್ರಿಕ್‌ ಸಮಸ್ಯೆ ಆಗಿತ್ತು. ಇಸಿಜಿ, ಎಕೋ ಎಲ್ಲಾ ನಾರ್ಮಲ್ ಇದೆ. ಕೆಲ ಹೊತ್ತಿನ ಬಳಿಕ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗಿ ಆಗುತ್ತೇನೆ ಎಂದು ಹೇಳಿದರು.

Ad Widget . Ad Widget . Ad Widget .

Leave a Comment

Your email address will not be published. Required fields are marked *