ಎಸ್ ಡಿಎಂ ಶಾಲೆಯ ಕಾಮುಕ ಶಿಕ್ಷಕನಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಸಮಗ್ರ ನ್ಯೂಸ್‌ : ದ. ಕ ಜಿಲ್ಲೆಯ ಉಜಿರೆಯ ಎಸ್ ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಕಾಮುಕ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ ಐಆರ್ ಪ್ರಕರಣ ದಾಖಲಾಗಿದೆ.

Ad Widget ... ..

ಶಿಕ್ಷಕ ವಿರಾಜ್ ಜೈನ್ ಎಂಬಾತ ಅಪ್ರಾಪ್ತ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಕಳೆದ 2023 ಜೂನ್ ನಿಂದ ಈತನ ಈ ವರ್ತನೆಯಿಂದ ಶಾಲೆಗೆ ತೆರಳಲು ವಿದ್ಯಾರ್ಥಿನಿಯರು ಹಿಂದೇಟು ಹಾಕುತ್ತಿದ್ದರು. ಪೋಷಕರು ವಿಚಾರಿಸಿದಾಗ 6ನೇ ತರಗತಿಯ ಅಪ್ರಾಪ್ತ ಬಾಲಕಿ ಅಳಲು ತೋಡಿಕೊಂಡಿದ್ದಳು.

Ad Widget

ಹಾಗಾಗಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *