ಬೆಂಗಳೂರು: ಹಲವು ದಿನಗಳಿಂದ ನಡೆಯುತ್ತಿದ್ದ ಕರ್ನಾಟಕ ಸಿಎಂ ಬದಲಾವಣೆ ವಿಚಾರ ಇಂದು ತಾರ್ಕಿಕ ಅಂತ್ಯಕ್ಕೆ ತಲುಪಿದೆ. ಬಿ.ಎಸ್ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಇಂದು ಸಾಧನಸಮಾವೇಶದಲ್ಲಿ ಘೋಷಿಸಿದ್ದಾರೆ.
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ 2 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಊಟದ ನಂತರ ನಾನು ರಾಜ್ಯಪಾಲರನ್ನು ಭೇಟಿಯಾಗುತ್ತೇನೆ, ರಾಜೀನಾಮೆ ಪತ್ರ ಸಲ್ಲಿಸುತ್ತೇವೆ” ಎಂದು ಘೋಷಿಸಿದ್ದಾರೆ.
ದುಃಖತಪ್ತರಾಗಿ ಮಾತನಾಡಿದ ಅವರು “75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ ಮುಖ್ಯಮಂತ್ರಿ ಮಾಡಿದ ಅಮಿತ್ ಶಾರವರಿಗೆ, ಜೆ.ಪಿ ನಡ್ಡಾರವರಿಗೆ ಧನ್ಯವಾದತಿಳಿಸುತ್ತೇನೆ. ನಾನು ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ ಬದಲಿಗೆ ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ” ಎಂದರು.
ವಿಧಾನಸೌಧದಿಂದ ರಾಜಭವನದವರೆಗೆ ಕಾಲ್ನಡಿಗೆಯಲ್ಲಿ ಹೋಗಿ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.