ಸಮಗ್ರ ನ್ಯೂಸ್ : ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಶೇಕಡಾ ನೂರರಷ್ಟು ಮತದಾನಕ್ಕೆ ಸಹಕರಿಸುವಂತೆ ಹಾಸನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಡಿ. ಗಿರೀಶ್ ತಿಳಿಸಿದ್ದಾರೆ.
ಹಾಸನ ನಗರದ ಜಾಕಿ ಮತ್ತು ಗೋಕುಲದಾಸ ಕೈಗಾರಿಕಾ ಕಾರ್ಖಾನೆಗೆ ಹಾಸನ ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ಹಾಗೂ ಹಾಸನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅವರು ಭೇಟಿ ನೀಡಿ ಮತದಾನ ಮಾಹಿತಿಯುಳ್ಳ ಬ್ಯಾನರ್ ಅಳವಡಿಸಿ ಅಲ್ಲಿನ ಕಾರ್ಮಿಕರಿಗೆ ಮತದಾನ ಬಗ್ಗೆ ಜಾಗೃತಿ ಮೂಡಿಸಿದರು.
ಮತದಾನವೂ ಪ್ರತಿಯೊಬ್ಬರ ಹಕ್ಕಾಗಿದ್ದು ಇದೆ ಏ.೨೬ ರಂದು ತಪ್ಪದೆ ಮತಗಟ್ಟೆಗೆ ಹೋಗಿ ಮತ ಚಲಾವಣೆ ಮಾಡುವ ಮೂಲಕ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡುವಂತೆ ತಿಳಿಸಿದರು. ಹಾಸನ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇ ಶಕ ದಿನೇಶ್, ಕೈಗಾರಿಕಾ ಸಂಸ್ಥೆಯ ಜೆ.ಡಿ ಸಿದ್ದರಾಜು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತನ್ವೀರ್, ದ್ವಿತೀಯ ದರ್ಜೆ ಸಹಾಯಕರಾದ ಮೋಹನ್, ಕೃಷ್ಣೇಗೌಡ ಹಾಜರಿದ್ದರು.