ಸಮಗ್ರ ನ್ಯೂಸ್ : ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಶುಗರ್ ಲೆವಲ್‌ನಲ್ಲಿ ವ್ಯತ್ಯಾಸ ಆಗುತ್ತಿದ್ದು, ಹೆಲ್ತ್ ಚೆಕಪ್ ಮಾಡಿಸಬೇಕು ಎಂದು ದೆಹಲಿ ರೋಸ್ ಅವೆನ್ಯೂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿ ವಿಚಾರಣೆ ವೇಳೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗಂಭೀರ ಆರೋಪ ಮಾಡಿದ್ದಾರೆ.
ಅವರ ಆರೋಗ್ಯದ ಕುರಿತು ರೋಸ್ ಅವೆನ್ಯೂ ಕೋರ್ಟ್‌ಗೆ ಇ.ಡಿ ಪರ ವಕೀಲರು ಮಾಹಿತಿ ನೀಡಿದ್ದು, ಕೇಜ್ರಿವಾಲ್ ಅವರು ಜೈಲಿನಲ್ಲಿ ಮಾವಿನ ಹಣ್ಣು ತಿಂದು ರಕ್ತದ ಸಕ್ಕರೆ ಅಂಶ ಏರಿಸಿಕೊಂಡಿದ್ದಾರೆ. ರಕ್ತದ ಸಕ್ಕರೆ ಅಂಶ ಏರಿಕೆಯಾದರೆ ಅದರ ಆಧಾರದ ಮೇಲೆ ಜಾಮೀನು ಪಡೆಯಲು ತಂತ್ರ ರೂಪಿಸಿದ್ದಾರೆ ಎಂದಿದ್ದಾರೆ.
ಜೈಲಿನಲ್ಲಿ ಕೇಜ್ರಿವಾಲ್ ಅವರು ಉದ್ದೇಶಪೂರ್ವಕವಾಗಿ ಮಾವಿನ ಹಣ್ಣು ತಿನ್ನುತ್ತಿದ್ದಾರೆ ಎಂದು ಇ.ಡಿ ಕೋರ್ಟ್‌ಗೆ ಹೇಳಿದೆ. ಈ ವಾದ ಆಲಿಸಿದ ನ್ಯಾಯಾಲಯ ಕೇಜ್ರಿವಾಲ್ ಅವರ ಡೈಯಟ್ ಚಾರ್ಟ್ ನೀಡಲು ತಿಹಾರ್ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ನಾಳೆ ಈ ಬಗ್ಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮತ್ತೆ ವಿಚಾರಣೆ ನಡೆಸಲಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.