ಸಮಗ್ರ ನ್ಯೂಸ್ : ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕಟ್ಟಿ ಬಳಿ ನಡೆದಿದೆ.
ಕೊರಡಕೇರಿಯ ಅಮೋಘಸಿದ್ದಯ್ಯ ಗುರುವಿನ (32) ಮೃತ ದುರ್ದೈವಿ. ಅಮೋಘಸಿದ್ದಯ್ಯ ಕೊರಡಕೇರಿಯಿಂದ ಜೂಲಕಟ್ಟಿಯಲ್ಲಿ ಕಟ್ಟಿಗೆ ಕಡಿಯಲು ಕೂಲಿ ಕೆಲಸಕ್ಕೆ ಹೋಗಿದ್ದರು.
ಇಂದು ಮಧ್ಯಾಹ್ನ ದಿಢೀರ್ ಶುರುವಾದ ಮಳೆ- ಗಾಳಿ ಜತೆಗೆ ಸಿಡಿಲಿ ಬಡಿದು ಮೃತಪಟ್ಟಿದ್ದಾರೆ. ಪ್ರಕರಣ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.







