ಸಮಗ್ರ ನ್ಯೂಸ್ : ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್ನಲ್ಲೇ ಕೊಲೆ ಮಾಡಿರುವ ಘಟನೆ ನಡೆದಿದೆ.
ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ.
ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್ ಕೆಲ ದಿನಗಳಿಂದ ನೇಹಾ ಬೆನ್ನು ಬಿದ್ದಿದ್ದನು. ಆದರೆ ನೇಹಾ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ಫಯಾಜ್ನ್ನ್ನು ಅಲ್ಲಿದ್ದ ವ್ಯಕ್ತಿಗಳು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಈಗ ಫಯಾಜ್ನನ್ನು ಬಂಧಿಸಿದ್ದಾರೆ.