ಸಮಗ್ರ ಉದ್ಯೋಗ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸ್ಪೀಚ್ ಥೆರಪಿಸ್ಟ್ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 28, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ MASLP, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಬೆಂಗಳೂರು
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತು ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯ ವ್ಯವಸ್ಥಾಪಕರು (HR)
ಕೈಗಾರಿಕಾ ಆರೋಗ್ಯ ಕೇಂದ್ರ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್)
ಸುರಂಜನದಾಸ್ ರಸ್ತೆ, (ಹಳೆಯ ವಿಮಾನ ನಿಲ್ದಾಣದ ಹತ್ತಿರ)
ಬೆಂಗಳೂರು-560017