ರಾಯಚೂರು : ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್- ಐದು ಮಂದಿಗೆ ಗಾಯ, ಓರ್ವ ಗಂಭೀರ

ಸಮಗ್ರ ನ್ಯೂಸ್ : ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿದ್ದು, ಒಟ್ಟು ಐದು ಮಂದಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.

Ad Widget ... ..

ಸುರಂಗ ಮಾರ್ಗದ ಕೆಲಸದ ವೇಳೆ ಏಕಾಏಕಿ ಏರ್ ಬ್ಲಾಸ್ಟ್ ಸಂಭವಿಸಿದೆ. ಈ ವೇಳೆ ಒಂದು ಬದಿಯಲ್ಲಿ ಮಣ್ಣು ಕುಸಿದಿದೆ. ಘಟನೆಯಲ್ಲಿ ಉಸಿರಾಟದ ಸಮಸ್ಯೆಯಿಂದ ನಿತ್ರಾಣಗೊಂಡು ಸುರಂಗದಲ್ಲೇ ಸಿಲುಕಿದ್ದ ಕಾರ್ಮಿಕರನ್ನ ಕೂಡಲೇ ರಕ್ಷಿಸಲಾಗಿದೆ.

Ad Widget

ಐವರು ಕಾರ್ಮಿಕರಿಗೆ ಗಾಯಗಳಾಗಿದೆ. ಓರ್ವ ಕಾರ್ಮಿಕನ ಮೇಲೆ ಕಲ್ಲುಗಳು ಬಿದ್ದಿದ್ದು ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡ ಕಾರ್ಮಿಕ ಬಸವರಾಜ್ನನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಹುಲಗಣ್ಣ, ಮಲ್ಲರಾವ್, ಪ್ರಭಾಕರ್, ಮೈಕಲ್, ಮರಿಸ್ವಾಮಿಗೆ ಗಾಯಗೊಂಡ ಕಾರ್ಮಿಕರು ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *