ಸಮಗ್ರ ಉದ್ಯೋಗ: ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ವರದಿಗಾರ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು. ಮಾರ್ಚ್ 14ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಹುದ್ದೆಯ ಮಾಹಿತಿ:
ಕನ್ನಡ ರಿಪೋರ್ಟರ್- 5
ಇಂಗ್ಲಿಷ್ ರಿಪೋರ್ಟರ್- 1
ವಿದ್ಯಾರ್ಹತೆ:
ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 30, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ:
SC/ST/ಪ್ರವರ್ಗ-I ಅಭ್ಯರ್ಥಿಗಳು: ಇಲ್ಲ
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ: ಇಂಡಿಯನ್ ಪೋಸ್ಟಲ್ ಆರ್ಡರ್
ವೇತನ:
ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 37,900-70,850 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಕಾರ್ಯದರ್ಶಿ
ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ
ಅಂಚೆ ಪೆಟ್ಟಿಗೆ ಸಂಖ್ಯೆ. 5074
1 ನೇ ಮಹಡಿ
ವಿಧಾನ ಸೌಧ
ಬೆಂಗಳೂರು – 560001