ವಿರಾಜಪೇಟೆ: ಕೆಎಸ್ಆರ್ಟಿಸಿ ಬಸ್ಸು ಸ್ಕೂಟಿಗೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್ : ಬೆಂಗಳೂರಿನಿಂದ ವಿರಾಜಪೇಟೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು ಹಾಗೂ ವಿರಾಜಪೇಟೆಯಿಂದ ಬರುತ್ತಿದ್ದ ಸ್ಕೂಟಿ ನಡುವೆ ಬಿಟ್ಟಂಗಾಲದಲ್ಲಿ ಅಪಘಾತ ಸಂಭವಿಸಿದೆ.

Ad Widget ... ..

ಸ್ಕೂಟಿ ಸವಾರರಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಸ್ಥಳೀಯ ಆಟೋ ಚಾಲಕ ಕೆ. ವೇಣುಗೋಪಾಲ್ ಆತನನ್ನು ಮತ್ತು 11 ವರ್ಷದ ಬಾಲಕನನ್ನು ವಿರಾಜಪೇಟೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭ ಸ್ಕೂಟರ್ ಚಾಲಕ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

Ad Widget

ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿರಾಜಪೇಟೆ ಆಸ್ಪತ್ರೆಗೆ ದಾಖಲಪಡಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ವಿವರ ಇನ್ನಷ್ಟೇ ತಿಳಿಯಬೇಕಾಗಿದೆ.

Leave a Comment

Your email address will not be published. Required fields are marked *