ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾದ ನಡೆದಿದ್ದು, ಈ ವೇಳೆ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡದಿರುವ ಘಟನೆ ಇಂಫಾಲ್ ಪೂರ್ವ ಜಿಲ್ಲೆಯ ಮೊಯಿರಂಗ್ಕಂಪು ಸಜೆಬ್ನಲ್ಲಿ ನಡೆದಿದೆ.
ಗುಂಡಿನ ದಾಳಿಯ ನಂತರ ಮೂವರು ಸ್ಥಳದಿಂದ ಪರಾರಿಯಾಗಿದ್ದರು. ಅವರನ್ನು ಶುಕ್ರವಾರ ಸಂಜೆ ಘಟನಾ ಸ್ಥಳದಿಂದ 5 ಕಿ.ಮೀ. ದೂರದಲ್ಲಿ ಬಂಧಿಸಲಾಗಿದೆ. ಬಂಧಿತರಿಂದ ಒಂದು ಪಿಸ್ತೂಲ್, ಮದ್ದುಗುಂಡು ಮತ್ತು 1.5 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಸದ್ಯ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿ ಮತದಾನದ ಹಕ್ಕನ್ನು ಚಲಾಯಿಸಲು ಸಾಲುಗಟ್ಟಿ ನಿಂತಿದ್ದ ಮತದಾರರಲ್ಲಿ ಭಯವನ್ನು ಉಂಟುಮಾಡಿದೆ. ಮತದಾನ ಪ್ರದೇಶದಲ್ಲಿ ಸುಮಾರು 10 ಸೆಕೆಂಡುಗಳ ಕಾಲ ಗುಂಡಿನ ಚಕಮಕಿ ನಡೆಯಿತು. ಘಟನೆಯಲ್ಲಿ ಸಾವು ನೋವು ವರದಿಯಾಗಿಲ್ಲ.