Ad Widget .

ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ ಹಿಂದೂಪರ ಕಾರ್ಯಕರ್ತರಿಂದ ಥಳಿತ

ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರಿಂದ ಥಳಿಸಿ ನೈತಿಕ ಪೊಲೀಸ್​ಗಿರಿ ಮೆರೆದಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಈ ಘಟನೆ ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆ ಹೊರಟ್ಟಿದ್ದ ಲಾರಿಯನ್ನು ಹೆದ್ದಾರಿಯಲ್ಲೇ ತಡೆದು ಕಲ್ಲು ತೂರಿ, ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಎಂದು ಚಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಕಾಸರಗೋಡು ಮೂಲದ ಲಾರಿ ಚಾಲಕ ಉಮರ್​ ಮೋಯಿದ್ದೀನ್​​ಗೆ ಕಾಲಿನಿಂದ ಒದ್ದು ಕಟ್ಟಿಗೆಯಿಂದಲೂ ಹಲ್ಲೆ ಮಾಡಲಾಗಿದೆ. ಲಾರಿ ಚಾಲಕ ಉಮರ್ ತಲೆ, ಹೊಟ್ಟೆ, ಬೆನ್ನು, ಕಾಲಿಗೆ ಗಾಯಗಳಾಗಿದ್ದು, ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Ad Widget . Ad Widget . Ad Widget .

ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಭೇಟಿ ನೀಡಿದ್ದು, ಹಿಂದೂಪರ ಕಾರ್ಯಕರ್ತರನ್ನ ಸಮಾಧಾನ ಪಡಿಸಿದ್ದಾರೆ. ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ

Leave a Comment

Your email address will not be published. Required fields are marked *