ಕುಂದಾಪುರ: ನದಿಗೆ ಬಿದ್ದ ಮಗು ಮೃತ್ಯು

Ad Widget ... ..

ಕುಂದಾಪುರ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಎರಡು ವರ್ಷದ ಮಗು ಮನೆ ಸಮೀಪದ ನದಿ ದಡದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆಯಾತಪ್ಪಿ ನೀರಿಗೆ ಬಿದ್ದು ಮೃತ ಪಟ್ಟ ಘಟನೆ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಗುವನ್ನು ಉಪ್ಪುಂದ ಗ್ರಾಮದ ಕರ್ಕಿಕಳಿ ಚೌಕಿಮನೆ ವಿಶ್ವನಾಥ ಖಾರ್ವಿ ಅವರ ಮಗ ಸರ್ವದ (೨) ಎಂದು ಗುರುತಿಸಲಾಗಿದೆ. ಈ ಮಗುವನ್ನು ಮನೆಯ ಕೋಣೆಯಲ್ಲಿ ಮಲಗಿಸಿ ಉಪ್ಪುಂದ ಪೇಟೆಗೆ ಹೋಗಿದ್ದರು. ಇದೇ ವೇಳೆ ಮನೆಯ ಕೋಣೆಯಲ್ಲಿ ಮಲಗಿದ್ದ ಮಗು ಎದ್ದು ಮನೆಯಿಂದ ಹೊರಗೆ ಬಂದಿದ್ದಾನೆ. ಬಳಿಕ ಮನೆಯ ಸಮೀಪ ಹರಿಯುವ ಎಡಮಾವಿನ ಹೊಳೆಯ ದಡದಲ್ಲಿ ನಡೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಎಡಮಾವಿನ ಹೊಳೆಗೆ ಬಿದ್ದು ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದು, ಮೃತದೇಹವು ತೇಲಿಕೊಂಡು ಹೋಗಿ ಎಡಮಾವಿನ ಹೊಳೆಯು ಸಮುದ್ರವನ್ನು ಸೇರುವ ಉಪ್ಪುಂದ-ಕರ್ಕಿಕಳಿ ಬ್ರೇಕ್ ವಾಟರ್ ಸಮೀಪ ನೀರಿನಲ್ಲಿ ದೊರೆತಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *