ಸಮಗ್ರ ನ್ಯೂಸ್: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸುತ್ತೇನೆ. ಪ್ರಕರಣದ ತನಿಖೆ ನಡೆಸಿ ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸುವುದಾಗಿ ಎಐಸಿಸಿ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಭರವಸೆ ನೀಡಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆ 90 ದಿನಗಳಲ್ಲಿ ಪೂರ್ಣಗೊಳಿಸಿ ಆರೋಪಿಗೆ ಗಲ್ಲು ಶಿಕ್ಷೆ ನೀಡುವ ಮೂಲಕ ನೇಹಾ ಕುಟುಂಬಕ್ಕೆ ನ್ಯಾಯ ಒದಗಿಸಲಾಗುವುದು. ಆದರೆ ಈ ಪ್ರಕರಣವನ್ನು ರಾಜಕೀಯಗೊಳಿಸುವುದು ಸರಿಯಲ್ಲ ಎಂದರು.
ಈ ಹಿಂದೆ ಪರೇಶ್ ಮೇಸ್ತ ಸಾವಿನ ಪ್ರಕರಣವನ್ನೂ ಬಿಜೆಪಿಯವರು ರಾಜಕೀಯಗೊಳಿಸಿದ್ದರು. ಕೊನೆಗೆ ಅದು ಆಕಸ್ಮಿಕ ಮರಣ ಎಂದು ಸಿಬಿಐ ತನಿಖೆ ತಿಳಿಸಿತ್ತು. ನೇಹ ನಮ್ಮೆಲ್ಲರ ಪುತ್ರಿ, ಆರೋಪಿಯ ಬಂಧನವಾಗಿದೆ. ಪೂರ್ಣ ಶಕ್ತಿಯಿಂದ ತನಿಖೆ ನಡೆಸಲಾಗುವುದು ಎಂದರು.