Ad Widget .

ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಹತ್ಯೆ ಪ್ರಕರಣ| ನೇಹಾ ತಂದೆಗೆ ಕರೆ ಮಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನೇಹಾ ನಿವಾಸಕ್ಕೆ ಸಚಿವ ಎಚ್.ಕೆ ಪಾಟೀಲ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ವೇಳೆ ಹೆಚ್​​.ಕೆ.ಪಾಟೀಲ್​ ಅವರು ಮುಖ್ಯಮಂತ್ರಿಗಳಿಗೆ ಕರೆ ಮಾಡಿದರು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಹಾ ತಂದೆ ನಿರಂಜನ್​ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸಾಂತ್ವನ ಹೇಳಿದ್ದಾರೆ. ಕೊಲೆ ನಡೆದು ಆರು ದಿನಗಳು ಕಳೆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಅಂತ ನೇಹಾ ತಂದೆ ನಿರಂಜನ ಹಿರೇಮಠ ಆರೋಪಿಸಿದ್ದರು. ಅಲ್ಲದೆ ಸಿಎಂ, ಡಿಸಿಎಂ ಮತ್ತು ಗೃಹ ಸಚಿವರು “ವೈಯಕ್ತಿಕ ವಿಚಾರವಾಗಿ” ನಡೆದ ಕೊಲೆ ಎಂದು ಹೇಳುವ ಮೂಲಕ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಇನ್ನು ತಮ್ಮದೇ ಪಕ್ಷದ ಪಾಲಿಕೆ ಸದಸ್ಯನ ಪುತ್ರಿಯ ಕೊಲೆಯಾಗಿದ್ದರೂ ಮುಖ್ಯಮಂತ್ರಿಗಳು ನಿರಂಜನ ಹಿರೇಮಠ ಮನೆಗೆ ಭೇಟಿ ನೀಡದೆ ಇದ್ದಿದ್ದು, ಕೆರಳುವಂತೆ ಮಾಡಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರಂಜನ ಹಿರೇಮಠ ಅವರ ಬಳಿ ಕ್ಷಮೆ ಕೇಳಿದ್ದಾರೆ.

Ad Widget . Ad Widget . Ad Widget .

ಪ್ರಕರಣವನ್ನು ಸಿಐಡಿಗೆ ನೀಡಿದ್ದಕ್ಕೆ ನಿಮಗೆ ಧನ್ಯವಾದ ಅಂತ ನಿರಂಜನ ಹಿರೇಮಠ ಸಿಎಂಗೆ ಹೇಳಿದರು. ಇನ್ನೂ ಭಾವೋದ್ವೇಗದಲ್ಲಿ ನಾನು ಸಾಕಷ್ಟು ಟೀಕೆ ಟಿಪ್ಪಣಿ ಮಾಡಿದೇನೆ. ಸಿಎಂ, ಗೃಹ ಸಚಿವರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ನನ್ನ ಮಾತುಗಳಿಂದ ಯಾರಿಗಾದರೂ ಬೇಸರವಾದರೆ ಕ್ಷಮಿಸಿ ಎಂದು ನೇಹಾ ತಂದೆ ಹೇಳಿದ್ದಾರೆ. ಬಳಿಕ ಹೆಚ್​.ಕೆ ಪಾಟೀಲ್​ ಮಾತನಾಡಿ, ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿದ್ದಕ್ಕೆ ಸಮಾಧಾನ ಇದೆ. ವಿಶೇಷ ನ್ಯಾಯಾಲಯ ಸ್ಥಾಪನೆ ವಿಚಾರಕ್ಕೂ ಸಮಾಧಾನ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳಿದರು.

Leave a Comment

Your email address will not be published. Required fields are marked *