ಸಮಗ್ರ ನ್ಯೂಸ್: ಎ. 23ರಂದು ಮಲೇಷ್ಯಾ ಸಶಸ್ತ್ರ ಪಡೆಗಳ ಎರಡು ಹೆಲಿಕಾಪ್ಟರ್‌ಗಳು ಗಾಳಿಯಲ್ಲಿ ಡಿಕ್ಕಿ ಹೊಡೆದು ಹತ್ತು ಮಂದಿ ಸಾವನ್ನಪ್ಪಿದ್ದ ಭೀಕರ ಘಟನೆ ನಡೆದಿದೆ. ಇದು ಲುಮುಟ್‌ನಲ್ಲಿರುವ ರಾಯಲ್ ಮಲೇಷಿಯನ್ ನೇವಿ ನೆಲೆಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಸೋಶೀಯಲ್ ಮೀಡಿಯಾದಲ್ಲಿ ಈ ವೀಡಿಯೊ ವೈರಲ್ ಆಗಿದೆ.
ಮಿಲಿಟರಿ ಹೆಲಿಕಾಪ್ಟರ್‌ಗಳ ವಾಯು ಹಾರಾಟದ ಕುಶಲತೆಯನ್ನು ಪ್ರದರ್ಶಿಸುತ್ತಿರುವಾಗ ಅವುಗಳಲ್ಲಿ ಎರಡು ಡಿಕ್ಕಿ ಹೊಡೆದುಕೊಂಡವು. ಎರಡು ಹೆಲಿಕಾಪ್ಟರ್‌ಗಳಲ್ಲಿದ್ದವರಲ್ಲಿ ಯಾರೂ ಅಪಘಾತದಲ್ಲಿ ಬದುಕುಳಿಯಲಿಲ್ಲ. ಎರಡೂ ಹೆಲಿಕಾಪ್ಟರ್‌ಗಳಲ್ಲಿದ್ದ ಚಾಲಕರು ತರಬೇತಿ ಪಡೆಯುತ್ತಿದ್ದವರಾಗಿದ್ದರು. ಕೆಲವು ತರಬೇತಿ ವಿದ್ಯಾರ್ಥಿಗಳು ಹಾಗೂ ತರಬೇತಿದಾರರು ಇವುಗಳಲ್ಲಿದ್ದರು. ಸ್ಥಳೀಯ ವರದಿಗಳ ಪ್ರಕಾರ, M503-3 ಮಾರಿಟೈಮ್ ಆಪರೇಷನ್ಸ್ ಹೆಲಿಕಾಪ್ಟರ್ (HOM) ಏಳು ಸಿಬ್ಬಂದಿಯನ್ನು ಹೊಂದಿತ್ತು. ಆದರೆ ಇನ್ನೊಂದು, M502-6, ಮೂರು ಸದಸ್ಯರನ್ನು ಹೊಂದಿತ್ತು. ಎರಡೂ ಹೆಲಿಕಾಪ್ಟರ್‌ಗಳು ಮೇ 3-5ರಿಂದ ನಡೆಯಲಿರುವ ನೌಕಾಪಡೆಯ ದಿನ ಆಚರಣೆಗೆ ಸಂಬಂಧಿಸಿದ ತಾಲೀಮನ್ನು ಪಡೆಯುತ್ತಿದ್ದವು ಎಂದು ವರದಿಯಾಗಿದೆ