Ad Widget .

ಕೊಟಕ್ ಬ್ಯಾಂಕ್ ಮೇಲೆ RBI ನಿರ್ಬಂಧ|ಕ್ರೆಡಿಟ್ ಕಾರ್ಡ್ ವಿತರಣೆಗೆ ಬ್ರೇಕ್

ಸಮಗ್ರ ನ್ಯೂಸ್: ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ಇಂದು ಶಾಕ್‌ ನೀಡಿದೆ. ಈ ಬ್ಯಾಂಕ್ ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಟ್‌ ವಿತರಣೆ ಮಾಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌, ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು ಎಂದು ಆರ್‌ಬಿಐ ನಿರ್ಬಂಧ ಹೇರಿದೆ. ಇದರಿಂದಾಗಿ ಬ್ಯಾಂಕ್‌ಗೆ ಭಾರಿ ನಷ್ಟವಾಗಲಿದೆ ಎಂದು ಹೇಳಲಾಗುತ್ತಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಆದರೆ ಈ ಬ್ಯಾಂಕ್ ನ ಗ್ರಾಹಕರಿಗೆ ಭಯ ಎದುರಾಗಿದ್ದು ಇದಕ್ಕೆ ಬ್ಯಾಂಕ್ ನಿಂದ ಗ್ರಾಹಕರಿಗೆ ಭಯ ಪಡಬೇಕಿಲ್ಲ ಎಂದು ತಿಳಿಸಿದೆ. ಇದು ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ ವಿತರಿಸುವುದು, ಅವರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸುವುದಕ್ಕೆ ಆರ್‌ಬಿಐ ನಿರ್ಬಂಧ ಹೇರಿರುವ ಕಾರಣ ಹಳೆಯ ಗ್ರಾಹಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈಗಾಗಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರು, ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕ್‌ ಸೌಲಭ್ಯ ಹೊಂದಿರುವವರು ಸೇವೆಗಳನ್ನು ಪಡೆಯಬಹುದಾಗಿದೆ. ಹಾಗಾಗಿ, ಹಳೆಯ ಗ್ರಾಹಕರಿಗೆ ಆರ್‌ಬಿಐ ಆದೇಶದಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ಮಾಹಿತಿ ತಿಳಿಸಿದೆ.

Ad Widget . Ad Widget . Ad Widget .

2022 ಹಾಗೂ 2023ರಲ್ಲಿ ಆರ್‌ಬಿಐ ಐಟಿ ಪರಿಶೀಲನೆ ವೇಳೆ ಕೆಲವು ಲೋಪಗಳು ಎದುರಾಗಿದೆ. ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಗ್ರಾಹಕರು ಆನ್‌ಲೈನ್‌ ಮೂಲಕ ವಹಿವಾಟು ನಡೆಸಲು ಬ್ಯಾಂಕ್‌ ಸರಿಯಾದ ಸುರಕ್ಷತೆ ಒದಗಿಸಿಲ್ಲ, ಈ ಕುರಿತು ಆರ್‌ಬಿಐ ಆತಂಕ ವ್ಯಕ್ತಪಡಿಸಿದರೂ ಸುರಕ್ಷತೆ ನೀಡುವಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ವಿಫಲವಾಗಿದೆ. ಬ್ಯಾಂಕ್‌ನ ಐಟಿ ಮೂಲ ಸೌಕರ್ಯ, ಐಟಿ ನಿರ್ವಹಣೆ, ಪ್ಯಾಚ್‌ ಮತ್ತು ಚೇಂಜ್‌ ಮ್ಯಾನೇಜ್‌ಮೆಂಟ್‌, ಬಳಕೆದಾರರ ಅನುಮತಿ ನಿರ್ವಹಣೆ, ವೆಂಡರ್‌ ರಿಸ್ಕ್‌ ಮ್ಯಾನೇಜ್‌ಮೆಂಟ್, ಡೇಟಾ ಸೆಕ್ಯುರಿಟಿ ಸೇರಿ ಹಲವು ಸುರಕ್ಷತೆಗಳನ್ನು ಒದಗಿಸುವಲ್ಲಿ ಬ್ಯಾಂಕ್‌ ವಿಫಲವಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಇದೇ ಕಾರಣಕ್ಕಾಗಿ ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಹಿತಿ ನೀಡಿದೆ. ಈ ಹಿಂದೆ ಇದೇ ರೀತಿಯ ನಿರ್ಬಂಧವನ್ನು ಎಚ್‌ಡಿಎಫ್ ಸಿ ಬ್ಯಾಂಕ್ ಮೇಲು ಆರ್‌ಬಿಐ ಹೇರಿತು.

Leave a Comment

Your email address will not be published. Required fields are marked *