ಸಮಗ್ರ ನ್ಯೂಸ್: ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಊಟ ಮಾಡಿದ ಸಂಜೆ ವೇಳೆ ಎಲ್ಲರೂ ವಾಂತಿ ಹಾಗೂ ಇನ್ನಿತರ ಸಮಸ್ಯೆಗಳಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪರದಾಡಿದ ಘಟನೆ ನಡೆದಿದೆ. ಎಲ್ಲ ಆಸ್ಪತ್ರೆಗಳು ಏಕಾಏಕಿ ತುಂಬಿದ್ದ ಕಾರಣ ಒಂದು ರೀತಿಯ ಗೊಂದಲ ಉಂಟಾಯಿತು. ಅಸ್ವಸ್ಥಗೊಂಡವರು ಆರಂಭದಲ್ಲಿ ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದರು. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿದೆ. ಆದರೆ ಅಲ್ಲಿ ಚಿಕಿತ್ಸೆ ಕಷ್ಟವಾದಾಗ ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಕೆಲವರು ಚಿಕಿತ್ಸೆ ಪಡೆಯತ್ತಿದ್ದಾರೆ. ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗಿದೆ. ಹೀಗಾಗಿ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಮದುವೆ ಮನೆಯಲ್ಲಿ ಊಟ ತಿಂದವರೇ ತುಂಬಿಕೊಂಡಿದ್ದರು.
ಇನ್ನು ಈ ವಿಚಾರವಾಗಿ ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಡಿಕೇರಿ ಶಾಸಕ ಮಂತರ್ ಗೌಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.