ಹಾಸನ: ಪೆನ್ ಡ್ರೈವ್, ಅಶ್ಲೀಲ ವಿಡಿಯೋ ಪ್ರಕರಣ| ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋ ಪೆನ್‌ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸಲು‌ ರಾಜ್ಯ ಸರ್ಕಾರ ತೀರ್ಮಾನಿಸಿದೆ.

Ad Widget ... ..

ಹಾಸನ ಜಿಲ್ಲೆಯಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ ಐ ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ.

Ad Widget

Leave a Comment

Your email address will not be published. Required fields are marked *