ಬೆಂಗಳೂರು : ನಿನ್ನೆಯಷ್ಟೇ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿದ್ದಂತ ಬಸವರಾಜ ಬೊಮ್ಮಾಯಿಯವರು, ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, 30ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ರಾಜಕೀಯ ಹಿನ್ನಲೆ, ಉತ್ತಮ ನಡೆ, ವಿದ್ಯಾರ್ಹತೆ ಹೊಂದಿರುವವರು, ರಾಜಕೀಯ ಅನುಭವ ಹೊಂದಿರುವಂತ ಬಸವರಾಜ ಬೊಮ್ಮಾಯಿಯವರನ್ನು ಬಿಎಸ್ ಯಡಿಯೂರಪ್ಪ ನಂತ್ರ, ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿತ್ತು. ಇಂತಹ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜಭವನದ ಗಾಜಿನ ಅರಮನೆಯಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ಪ್ರಮಾಣ ವಚನ ಸ್ವೀಕರಿಸಿದರು. ಇವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಉಪಮುಖ್ಯಮಂತ್ರಿಗಳಾಗಿ ಆಯ್ಕೆಯಾಗಿರುವ ಆರ್.ಅಶೋಕ್, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು ಕೂಡಾ ಪ್ರಮಾಣ ವಚನ ಸ್ವೀಕರಿಸಿದರು.