ಚಾಮರಾಜನಗರ : ಸುನೀಲ್ ಬೋಸ್ ೧ ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ-ಮಾಜಿ ಶಾಸಕ ಆರ್ ನರೇಂದ್ರ

ಸಮಗ್ರ ನ್ಯೂಸ್ : ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ ಎಂದು ಮಾಜಿ ಶಾಸಕ ಆರ್ ನರೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

Ad Widget ... ..

ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ 1, 61,644 ಮತಗಳು ಚಲಾವಣೆಯಾಗಿದೆ. ಈ ಪೈಕಿ ಕಾಂಗ್ರೆಸ್ ಪಕ್ಷಕ್ಕೆ ಹನೂರು ವಿಧಾನಸಭಾ ಕ್ಷೇತ್ರ ಒಂದರಲ್ಲಿ 20 ರಿಂದ 25 ಸಾವಿರದವರೆಗೆ ಹೆಚ್ಚಿನ ಅಂತರದಲ್ಲಿ ಸಿಗಲಿದೆ.

Ad Widget

ಇದಲ್ಲದೆ ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ, ಟಿ.ನರಸೀಪುರ, ನಂಜನಗೂಡು, ಎಚ್ ಡಿ ಕೋಟೆ ,ವರುಣ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಲೀಡ್ ಬರಲಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್ಚಿನ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದರು.

Leave a Comment

Your email address will not be published. Required fields are marked *